ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Update: 2019-12-19 14:16 GMT

ಉಡುಪಿ, ಡಿ.19: ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಇಂದು ಸಂಜೆ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಬಹಳ ಅಗತ್ಯವಾದುದು. ಆದುದರಿಂದ ಪೊಲೀಸರು ಈ ಕ್ರೀಡಾಕೂಟದಲ್ಲಿ ಬಹಳ ಆಸಕ್ತಿ ಹಾಗೂ ಸ್ಪೂರ್ತಿಯಿಂದ ಭಾಗವಹಿಬೇಕು ಎಂದು ಶುಭಹಾರೈಸಿದರು.

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಯೋಗೇಶ್ ನಾಯ್ಕ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಡಿಎಆರ್‌ನ ಎಆರ್‌ಎಸ್ಸೈ ಸುಧಾಕರ್ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭ ವಿವಿಧ ಕ್ರೀಡಾ ತಂಡ ಗಳಿಂದ ಪಥ ಸಂಚಲನ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಪೊಲೀಸ್ ಕಂಟ್ರೋಲ್ ರೂಮ್‌ನ ಪಿಎಸ್ಸೈ ಬಿ.ಮನಮೋಹನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News