ಡಿ.21ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

Update: 2019-12-19 14:17 GMT

ಉಡುಪಿ, ಡಿ.19: ಉಡುಪಿ ಜಿಲ್ಲಾ ಗೃಹ ರಕ್ಷಕದಳದ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಡಿ.21ರಂದು ಸಂಜೆ 4 ಗಂಟೆಗೆ ಅಜ್ಜರಕಾಡಿನ ಗೃಹರಕ್ಷಕದಳ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಉತ್ತಮ ಸೇವೆ ಸಲ್ಲಿಸಿದ ಜಿಲ್ಲಾ ಉಪಸಮಾದೇಷ್ಟರಮೇಶ, ಬ್ರಹ್ಮಾವರ ಘಟಕದ ಸೀನಿಯರ್ ಪ್ಲಟೂನ್ ಕಮಾಂಡರ್ ಮಂಜುನಾಥ ಶೆಟ್ಟಿಗಾರ್ ಮತ್ತು ರಾಜ್ಯ ಮಟ್ಟದ ಗೃಹರಕ್ಷಕರ ಕ್ರೀಡಾಕೂಟದ ವೃತ್ತಿಪರ ಕ್ರೀಡಾಕೂಟದ ಪ್ರಥಮ ಚಿಕಿತ್ಸೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದ ಗೃಹರಕ್ಷಕರನ್ನು ಸನ್ಮಾನಿಸಲಾಗುವುದೆಂದು ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಶಾಸಕ ರಘುಪತಿ ಭಟ್, ಮಲ್ಪೆ ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಆರ್.ಚೇತನ್,ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ಐಎಂಎ ಕರಾವಳಿ ಶಾಖೆಯ ಅಧ್ಯಕ್ಷ ಡಾ.ಉಮೇಶ್ ಪ್ರಭು ಮುಖ್ಯ ಅತಿಥಿಗಳಾಗಿರು ವರು. ಉಡುಪಿ, ಮಣಿಪಾಲ, ಕಾಪು, ಪಡುಬಿದ್ರೆ, ಕಾರ್ಕಳ, ಕುಂದಾಪುರ, ಬೈಂದೂರು, ಹಾಗೂ ಬ್ರಹ್ಮಾವರ ಘಟಕಗಳ 50 ಗೃಹರಕ್ಷಕ ಸಿಬ್ಬಂದಿಗಳು, ಅಧಿಕಾರಿಗಳು ಭಾಗವಹಿಸಲಿರುವರು ಎಂದರು.

ಸುದ್ದಿಗೋಷ್ಟಿಯಲ್ಲಿ ಗೃಹರಕ್ಷಕ ದಳದ ಅಧಿಕಾರಿ ರಮೇಶ್, ಅಧೀಕ್ಷಕಿ ಕವಿತಾ, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News