ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತ

Update: 2019-12-19 17:45 GMT

ಮಂಗಳೂರು, ಡಿ.19: ನಗರದಲ್ಲಿ ಇಂದು ನಡೆದ ಹಿಂಸಾಚಾರದ ನಂತರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಕೋಮು ಪ್ರಚೋದಕ ಸಂದೇಶಗಳು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.19ರ ರಾತ್ರಿ 10 ಗಂಟೆಯಿಂದ 48 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News