ಇದು ನನ್ನ ಸೋಲು, ಬಿಜೆಪಿಯದ್ದಲ್ಲ. ರಘುವರ ದಾಸ್

Update: 2019-12-23 18:32 GMT

ಹೊಸದಿಲ್ಲಿ, ಡಿ. 23: ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿ ಕೂಟ ಹಾಗೂ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಜೆಎಂಎಂ ನೇತೃತ್ವದ ಕಾಂಗ್ರೆಸ್ ಹಾಗೂ ಆರ್‌ಜೆಡಿ ಒಳಗೊಂಡಿರುವ ಮೈತ್ರಿ ಕೂಟ ಜಾರ್ಖಂಡ್ ವಿಧಾನ ಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ಜಾರ್ಖಂಡ್ ಚುನಾವಣೆಯಲ್ಲಿ ಜಯ ಗಳಿಸಿದ ಜೆಎಂಎಂ ನೇತೃತ್ವದ ಮೈತ್ರಿ ಕೂಟ ಹಾಗೂ ಜೆಎಂಎಂ ನಾಯಕ ಹೇಮಂತ್ ಸೊರೇನ್‌ಗೆ ಅಭಿನಂದನೆಗಳು. ರಾಜ್ಯದ ಅಧಿಕಾರ ವಹಿಸುತ್ತಿರುವ ಅವರಿಗೆ ಶುಭ ಹಾರೈಕೆಗಳು ಎಂದು ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News