ಕೇರಳದಲ್ಲಿ ಬಿಎಸ್‌ವೈ ಕಾರಿಗೆ ಮುತ್ತಿಗೆ: ಗೋ ಬ್ಯಾಕ್ ಘೋಷಣೆ ಕೂಗಿದ ಪ್ರತಿಭಟನಾಕಾರರು

Update: 2019-12-24 12:59 GMT

ಕಣ್ಣೂರು, ಡಿ.24: ವಿವಿಧ ದೇವಾಲಯಗಳಿಗೆ ಭೇಟಿ ನೀಡಲೆಂದು ಕೇರಳಕ್ಕೆ ಆಗಮಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ.

ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಿ ಹಿಂದಕ್ಕೆ ತೆರಳುವಂತೆ ಘೋಷಣೆ ಕೂಗಿದರು. ಈ ವೇಳೆ ಬೆಂಗಾವಲು ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಮುಂದಕ್ಕೆ ತೆರಳಿದರು. ಆದರೂ ಪಟ್ಟು ಬಿಡದ ಪ್ರತಿಭಟನಾಕಾರರು ಸಿಎಂ ಕಾರಿನ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಲವು ದೇವಾಲಯಗಳಿಗೆ ಭೇಟಿ ನೀಡಲು ಸೋಮವಾರ ಯಡಿಯೂರಪ್ಪ ಕೇರಳಕ್ಕೆ ತೆರಳಿದ್ದರು. ಆದರೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ಕೂಗಿದ ಹಿನ್ನೆಲೆ ಯಡಿಯೂರಪ್ಪ ಇಂದೇ ರಾಜ್ಯಕ್ಕೆ ಹಿಂದಿರುಗಲಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ ತಿರುವನಂತಪುರದಲ್ಲಿರುವ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ತೆರಳಿದ್ದ ಸಿಎಂ ಬಿಎಸ್‌ವೈ ವಿರುದ್ಧ ಕೇರಳ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಳಿಕ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News