ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
Update: 2019-12-25 15:03 GMT
ಪುತ್ತೂರು: ಬೈಕೊಂದು ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬುಧವಾರ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರ್ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ಅರಿಯಡ್ಕ ಎಂಬಲ್ಲಿನ ನಿವಾಸಿ ಗುರುನಾಥ್(50) ಎಂದು ಗುರುತಿಸಲಾಗಿದೆ. ಗುರುನಾಥ್ ಅವರು ರಸ್ತೆ ದಾಟಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಶ್ರೇಯಸ್ ಎಂಬವರ ಬೈಕ್ ಢಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ತಲೆ ಮತ್ತು ದೇಹದ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.