ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತಿಸಲಾಗುವುದು : ಸಿಎಂ

Update: 2019-12-25 17:08 GMT

ಕಾಪು : ರಾಜ್ಯದಲ್ಲಿನ ನಗರ, ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿರುವ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ ಡಿಜಿಟಲ್ ಗ್ರಂಥಾಲಯಗಳನ್ನಾಗಿ  ಪರಿವರ್ತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅವರು ಬುಧವಾರ  ಕಾಪು ತಾಲೂಕಿನ ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ-ವಜ್ರ-ಸ್ವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮೃದ್ಧ ಕರ್ನಾಟಕ ಕನಸನ್ನು ಸಾಕರಗೊಳಿಸುತ್ತಿರುವ ನಮ್ಮ ಸರ್ಕಾರ, ಶಿಕ್ಷಣ ಕ್ಷೇತ್ರವನ್ನು ಕ್ರಿಯಾಶೀಲಗೊಳಿಸಲು ವಿಶೇಷ ಒತ್ತು ನೀಡಲಾಗಿದ್ದು, 10000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಕಾಲೇಜು ಶಿಕ್ಷಣ ಮಟ್ಟದಲ್ಲಿ 14242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದ್ದು, ಬಜೆಟ್ ನಲ್ಲಿ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗ ಸೃಷ್ಠಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಪ್ರಾಥಮಿಕ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಒಳಗೊಂಡಂತೆ 5771 ಕೊಠಡಿಗಳ ಮರು ನಿರ್ಮಾಣ ಹಾಗೂ ದುರಸ್ತಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವ್ಯಾಕರಣ ಮತ್ತು ಇಂಗ್ಲೀಷ್ ಭಾಷಾ ಕೌಶಲ್ಯವನ್ನು ಉತ್ತಮ ಪಡಿಸಲು ವಿಶೇಷ ತರಗತಿ ಆಯೋಜಿಸುವುದಲ್ಲದೇ, ವಿಶ್ವಾಸ ಕಿರಣ ಎಂಬ ವಿಶೆಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಗೃಹ ಹಾಗೂ ಸಹಕಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಮುಜರಾಯಿ ಮತ್ತು ಮೀನುಗಾರಿಕಾ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್ ಮೆಂಡನ್, ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News