ಡಿ.27: ಗರ್ಭಪೂರ್ವ, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಕುರಿತು ಕಾರ್ಯಾಗಾರ
ಉಡುಪಿ, ಡಿ.26: ಜಿಲ್ಲಾಡಳಿತ ಉಡುಪಿ, ಜಿಪಂ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಸಕ್ಷಮ ಪ್ರಾಧಿಕಾರ ಪಿಸಿ ಮತ್ತು ಪಿಎನ್‌ಡಿಟಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗಭರ್ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಕುರಿತು (ಪಿಸಿ ಎಂಡ್ ಪಿಎನ್‌ಡಿಟಿ) ಕಾರ್ಯಾಗಾರ ಡಿ.27ರ ಬೆಳಗ್ಗೆ 10:30ಕ್ಕೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ಡಿಎಚ್‌ಓ) ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಜಿಪಂ ಅಧ್ಯಕ್ಷ ದಿನಕರಬಾಬು ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕಠಿಣ ಕಾನೂನು ಕ್ರಮ: ಭ್ರ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಅದಾಗಿಯೂ ಜಿಲ್ಲೆಯ ಕೆಲವೊಂದು ಆಸ್ಪತ್ರೆಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಪ್ರಕರಣಗಳು ಇರುವ ಸಾಧ್ಯತೆಗಳಿದ್ದು, ಈ ಬಗ್ಗೆ ಪೊಲೀಸ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಅಂತಹ ಸಂಸ್ಥೆಗಳನ್ನು ಪತ್ತೆ ಹಚ್ಚಿ ತನಿಖೆ ನಡೆಸಲಾಗುವುದು ಎಂದು ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿಸಿ ಮತ್ತು ಪಿಎನ್‌ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವಪೂರ್ವ ಭ್ರ್ರೂಣಲಿಂಗ ಪತ್ತೆ ಕಾಯ್ದೆ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ್ರೂಣಲಿಂಗ ಪತ್ತೆ ಪ್ರಕರಣಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಈಗಾಗಲೇ ಕೆಲವೊಂದು ಸಂಸ್ಥೆಗಳ ಮೂಲಕ ಕುಟುಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸದ್ಯದಲ್ಲೇ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ಆಸ್ಪತ್ರೆಗಳ ಸ್ಕಾನಿಂಗ್ ಮೆಷಿನ್‌ಗಳನ್ನು ಸೀಝ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಗರ್ಭಿಣಿಯರನ್ನು ಸ್ಕಾನಿಂಗ್ ಮಾಡಿದ ದಾಖಲೆಗಳನ್ನಿಡದೇ ಇರುವುದು ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಡಾ.ಪ್ರತಾಪ್ ತಿಳಿಸಿದರು.
ಗರ್ಭಿಣಿಯರನ್ನು ಸ್ಕಾನಿಂಗ್ ಮಾಡಿದ ದಾಖಲೆಗಳನ್ನಿಡದೇ ಇರುವುದು ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಡಾ.ಪ್ರತಾಪ್ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಿಸಿ ಮತ್ತು ಪಿಎನ್‌ಡಿಟಿ ಸಲಹಾ ಸಮಿತಿಯ ಸದಸ್ಯೆ ಶೋಭಾ ಎಂ. ಹೆಗ್ಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಮರಾವ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್, ಸ್ತ್ರೀರೋಗ ತಜ್ಞೆ ಡಾ.ವಿಜಯಾ ವೈಬಿ, ಬಂಟಕಲ್ಲು ಸಮಾಜ ಸೇವಕಿ ಗೀತಾ ವಾಗ್ಲೆ ಮತ್ತಿತರರು ಹಾಜರಿದ್ದರು.