ಬಸ್ಸು ಢಿಕ್ಕಿ, ಸ್ಕೂಟಿ ಸಹಸವಾರ ಮೃತ್ಯು

Update: 2019-12-26 16:58 GMT

ಕಾರ್ಕಳ, ಡಿ.26: ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಸಂಜೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.

ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೆಳ್ಮಣ್ ಕಡೆ ಹೋಗುತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದ ಸಹಸವಾರ ಸದಾನಂದ ಮೂಲ್ಯ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಅರು ಸ್ಥಳದಲ್ಲೇ ಮೃತಪಟ್ಟರು.

ಸ್ಕೂಟಿ ಸವಾರ ಜೇಮ್ಸ್ ಕಾರ್ಡೋಜಾ ಅವರು ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News