ಜ.1-10ರವರೆಗೆ ಮದ್ಯ ವ್ಯಸನ ವಿಮುಕ್ತಿ -ವಸತಿ ಶಿಬಿರ

Update: 2019-12-27 14:39 GMT

ಉಡುಪಿ, ಡಿ.27: ಮುಂಬೈ ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್ ಉಡುಪಿ- ಮಣಿಪಾಲ ಇವುಗಳ ಸಂಯುಕ್ತ ಆಶ್ರಯ ದಲ್ಲಿ 27ನೆ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರವನ್ನು ಜ.1ರಿಂದ ಜ.10ರ ವರೆಗೆ ಆಸ್ಪತ್ರೆಯ ಕಮಲ್ ಎ.ಬಾಳಿಗಾ ಸಭಾಂಗಣದಲ್ಲಿ ಆಯೋಜಿಸ ಲಾಗಿದೆ.

ಎಲ್ಲ ಶಿಬಿರಗಳಿಂದ ಒಟ್ಟು 1700ಕ್ಕೂ ಅಧಿಕ ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ನೀಡಿದ್ದು, ಇದರಲ್ಲಿ ಶೇ.28ರಷ್ಟು ಮಂದಿ ಮದ್ಯ ವ್ಯಸನದಿಂದ ಮುಕ್ತರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಮದ್ಯವ್ಯಸನದಿಂದ ಮುಕ್ತರಾದ 84 ಮಂದಿಯನ್ನು ಸನ್ಮಾನಿಸಲಾ ಗಿದೆ ಎಂದು ಆಸ್ಪತ್ರೆಯ ಮಾನಸಿಕ ತಜ್ಞ ಡಾ.ವಿರೂಪಾಕ್ಷ ದೇವರ ಮನೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜ.1ರಂದು ಸಂಜೆ 5ಗಂಟೆಗೆ ಶಿಬಿರವನ್ನು ಜಿಲ್ಲಾಧಿಕಾರಿ ಜಗದೀಶ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಲಿರುವರು. 10ರಂದು ಮಧ್ಯಾಹ್ನ 2:30ಕ್ಕೆ ನಡೆಯುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಭಾಸ್ಕರ್ ವಿ.ಬಿ. ಭಾಗವಹಿಸಲಿರುವರು.

ಶಿಬಿರದಲ್ಲಿ ಒಟ್ಟು 50 ಮಂದಿ ಭಾಗವಹಿಸಲು ಅವಕಾಶ ಕಲ್ಪಿಸಿದ್ದು, ಈಗಾ ಗಲೇ 30 ನೊಂದವಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಮಹಿಳಾ ಮದ್ಯ ವ್ಯಸನಿ ಗಳಿಗೆ ಪ್ರತ್ಯೇಕ ವಾರ್ಡ್‌ನ ವ್ಯವಸ್ಥೆ ಮಾಡಲಾಗಿದೆ. ಈ ಬಾರಿಯ ಶಿಬಿರದ ಉದ್ಘಾಟನಾ ಸಮಾರಂಭ ದಲ್ಲಿ ಮೂರು ವರ್ಷಕ್ಕೂ ಅಧಿಕ ಕಾಲ ಮದ್ಯದಿಂದ ಮುಕ್ತರಾಗಿರುವವರನ್ನು ಸನ್ಮಾನಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮನಶಾಸ್ತ್ರಜ್ಞ ನಾಗರಾಜ್ ಮೂರ್ತಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News