ಪ್ರಚೋದನಕಾರಿ ಸಂದೇಶ ರವಾನೆ ಆರೋಪ : ಯುವಕ ಸೆರೆ
Update: 2019-12-30 18:02 GMT
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.
ಪಾಂಡೇಶ್ವರ ನಿವಾಸಿ ಮೊಯ್ದಿನ್ ಹಮೀದ್ (25) ಬಂಧಿತ ಆರೋಪಿ.
ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.