ಫೆ.15ರಂದು ಪಿಪಿಸಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Update: 2020-02-10 17:18 GMT

ಉಡುಪಿ, ಫೆ.10: ಪೂರ್ಣಪ್ರಜ್ಞ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗ, ಮಂಗಳೂರು ವಿವಿ ಪದವಿ ಕಾಲೇಜು ರಸಾಯನಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಕಾಲೇಜಿನ ಐಕ್ಯೂಎಸಿಗಳ ಸಂಯುಕ್ತ ಆಶ್ರಯದಲ್ಲಿ ‘ಎಡ್ವಾನ್ಸ್‌ಸ್ ಇನ್ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್’ ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫೆ.15ರಂದು ನಡೆಯಲಿದೆ.

ಬೆಳಗ್ಗೆ 9:30ಕ್ಕೆ ಶ್ರೀಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿರುವ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ವಿಚಾರಸಂಕಿರಣವನ್ನು ಉದ್ಘಾಟಿಸುವರು. ಕಾಲೇಜಿನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್, ಕುವೆಂಪು ವಿವಿಯ ವಿಶ್ರಾಂತ ಉಪಕುಲಪತಿ ಪ್ರೊ. ಬಿ.ಎಸ್. ಶೇರಿಗಾರ್ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸುರತ್ಕಲ್ಲಿನ ಎನ್‌ಐಟಿಕೆ ಪ್ರಾಧ್ಯಾಪಕ ಪ್ರೊ.ಎ.ನಿತ್ಯಾನಂದ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 3:45ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಗೌರವ ಕೋಶಾಧಿಕಾರಿ ಪ್ರದೀಪ್‌ಕುಮಾರ್, ಮಂಗಳೂರು ವಿವಿ ರಸಾಯನ ಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಕೃಷ್ಣ ಕಾರಂತ ಮೊದಲಾ ದವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News