ಮಹಿಳಾ ಸಬಲೀಕರಣದ ನೆಜ ಅನುಷ್ಠಾನ ಅಗತ್ಯ: ಡಿಸಿ ಜಗದೀಶ್

Update: 2020-02-12 14:57 GMT

ಉಡುಪಿ, ಫೆ.12: ವಿದ್ಯಾರ್ಥಿಗ್ಞಎ ಧನಾತ್ಮಕ ಚಿಂತನೆಯನ್ನು ತಮ್ಮ ನಿತ್ಯದ ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕರ್ನಾಟಕ ನಾಗರಿಕ ಸೇವೆಗೆ ಸೇರಿ ಜನಸೇವೆಯನ್ನು ಮಾಡುವ ಕೈಂಕರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಅದೇ ದೇವರ ಸೇವೆಯಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಪ್ರೊ.ಪಿ.ರಾಘವೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಿ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮಾಹಿತಿಯನ್ನು ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೊಸ-ಹೊಸ ವಿಚಾರಗಳನ್ನು ಮನನ ಮಾಡುವ ಹಾಗೂ ಅದಕ್ಕೆ ಬೇಕಾಗುವ ಕೌಶಲ್ಯಗಳನ್ನು ಬೆಳೆಸಿ ಕೊಳ್ಳಬೇಕುಂದು ಕಿವಿಮಾತು ಹೇಳಿದರು.

ದ.ಕ. ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶು ಪಾಲ ಡಾ.ಭಾಸ್ಕರ್ ಶೆಟ್ಟಿ ವಹಿಸಿದ್ದರು. ಕಾಲೇಜಿನ ವಾರ್ಷಿಕ ವರದಿಯನ್ನು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಗೌರಿ ಎಸ್.ಭ್ ವಾಚಿಸಿದರು.

ಕಾಲೇಜಿನ ಕಲಾ ನಿಕಾಯದ ಪ್ರೊ.ಸೋಜನ್ ಕೆ.ಜಿ., ವಿಜ್ಞಾನ ನಿಕಾಯದ ಪ್ರೊ.ರಾಮಚಂದ್ರ ಅಡಿಗ ಜಿ., ಸ್ನಾತಕೋತ್ತರ ವಾಣಿಜ್ಯ ವಿಭಾಗದ ಡಾ. ಉಮೇಶ ಮಯ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಮಿತ್ರಾ ಭಟ್, ವಿದ್ಯಾರ್ಥಿ ನಾಯಕಿಯರಾದ ಭಾವನಾ ಆರ್.ಭಟ್, ನಯನ, ಶ್ರುತಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ನಿತ್ಯಾನಂದ ಎನ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಅಶೋಕ ಭಂಡಾರಿ ವಂದಿಸಿದರು. ನಂತರ ವಿದ್ಯಾರ್ಥಿನಿಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನ ಜರಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News