ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಎನ್ನುವ ಸಂದೇಶಗಳು 'ಸಂಪೂರ್ಣ ಸುಳ್ಳು': ಭಾರತೀಯ ಸೇನೆ
Update: 2020-03-30 12:39 GMT
ಹೊಸದಿಲ್ಲಿ: ಕೊರೋನ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ವದಂತಿ 'ಸಂಪೂರ್ಣ ಸುಳ್ಳು' ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
"ಇದು ಸಂಪೂರ್ಣ ಸುಳ್ಳು" ಎಂದು ಭಾರತೀಯ ಸೇನೆಯು ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.
"ಎಪ್ರಿಲ್ ಮಧ್ಯಭಾಗದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಎನ್ನುವ ಸುಳ್ಳು ಮತ್ತು ದುರುದ್ದೇಶಪೂರಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ಸಂಪೂರ್ಣ ಸುಳ್ಳು" ಎಂದು ಭಾರತೀಯ ಸೇನೆ ಟ್ವೀಟ್ ಮೂಲಕ ಹೇಳಿದೆ.