ಪಿಎಂ ಕೇರ್ಸ್ ನಿಧಿ ರದ್ಧತಿ ಕೋರಿದ್ದ ಅರ್ಜಿ ವಜಾ

Update: 2020-04-13 16:53 GMT

ಹೊಸದಿಲ್ಲಿ, ಎ.13: ಕೋವಿಡ್-19 ಪಿಡುಗಿನಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಾರ್ವಜನಿಕ ದೇಣಿಗೆ ಸ್ವೀಕರಿಸಲು ಪಿಎಂ ಕೇರ್ಸ್ ನಿಧಿ ಸ್ಥಾಪಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

 ನಿಧಿಯ ನ್ಯಾಯಬದ್ಧತೆಯನ್ನು ಪ್ರಶ್ನಿಸಿ ನ್ಯಾಯವಾದಿ ಎಂಎಲ್ ಶರ್ಮ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್‌ಎ ಬೋಬ್ಡೆ ಮತ್ತು ನ್ಯಾಯಾಧೀಶರಾದ ಎಲ್ ನಾಗೇಶ್ವರ ರಾವ್ ಮತ್ತು ಎಂಎಂ ಶಾಂತನಗೌಡರ್ ಅವರಿದ್ದ ನ್ಯಾಯಪೀಠವು, ವಿಷಯವನ್ನು ಸಂಪೂರ್ಣ ತಪ್ಪಾಗಿ ಗ್ರಹಿಸಿ ಸಲ್ಲಿಸಿದ್ದ ಅರ್ಜಿಯಿದು. ಇದಕ್ಕಾಗಿ ನಿಮ್ಮ ಮೇಲೆ ದಂಡ ವಿಧಿಸಬಹುದು ಎಂದು ತಿಳಿಸಿ ವಜಾಗೊಳಿಸಿದೆ.

ಕೊರೋನ ವೈರಸ್‌ನಂತಹ ಯಾವುದೇ ತುರ್ತು ಸಂದರ್ಭವನ್ನು ಎದುರಿಸಲು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಾರ್ಚ್ 28ರಂದು ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News