ಉತ್ತರ ಪ್ರದೇಶದಲ್ಲಿ 71,000 ಮಂದಿ ವಿರುದ್ಧ ಲಾಕ್‌ಡೌನ್ ಉಲ್ಲಂಘನೆ ಪ್ರಕರಣ ದಾಖಲು

Update: 2020-04-21 06:14 GMT

ಪ್ರಯಾಗ್ ರಾಜ್, ಎ.21: ಉತ್ತರ ಪ್ರದೇಶದಲ್ಲಿ ಲಾಕ್ ಡೌನ್  ಮಾನದಂಡಗಳನ್ನು ಉಲ್ಲಂಘಿಸಿದ  24,000ಕ್ಕೂ ಹೆಚ್ಚು ಎಫ್‌ಐಆರ್‌  ದಾಖಲಾಗಿದ್ದು  ಮತ್ತು ಇದುವರೆಗೆ 71,000 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಲಾಕ್ ಡೌನ್ ಉಲ್ಲಂಘಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 188 ರ ಅಡಿಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಗೃಹ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ  ಮಾಹಿತಿ ನೀಡಿದ್ದಾರೆ.

ಜೈಲುಗಳ ಮೇಲಿನ ಒತ್ತಡವನ್ನು ತಪ್ಪಿಸಲು ಆರೋಪಿಗಳನ್ನು  ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಈ ಅವಧಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರಿಂದ ಪೊಲೀಸರು 9.5 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

ರಾಜ್ಯದಲ್ಲಿ  1,184 ಜನರು ಕೊರೋನ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. 140 ಜನರು ಚೇತರಿಸಿಕೊಂಡರೆ, 18 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News