ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೋನ ವೈರಸ್: 125 ಮಂದಿ ಕ್ವಾರಂಟೈನ್ ನಲ್ಲಿ

Update: 2020-04-21 07:49 GMT

ಹೊಸದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನ ವೈರಸ್ ದೃಢಪಟ್ಟಿದ್ದು, 125 ಮಂದಿಯನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.

“ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ ಒಬ್ಬರಲ್ಲಿ ಕೊರೋನ ದೃಢಪಟ್ಟಿದ್ದು, 125 ಜನರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ” ಎಂದು ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ.

ಈಗಾಗಲೇ ಮಹಿಳೆಯನ್ನು ಬಿರ್ಲಾ ಮಂದಿರ್ ಕೋವಿಡ್ 19 ಹೆಲ್ತ್ ಸೆಂಟರ್ ಗೆ ದಾಖಲಿಸಲಾಗಿದೆ. ಪುತ್ರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News