ದೊರೆಯದ ಪರಿಹಾರ ಸಾಮಗ್ರಿ; ರೊಚ್ಚಿಗೆದ್ದ ಸ್ಥಳೀಯರಿಂದ ಹಿಂಸಾಚಾರ; 3 ಪೊಲೀಸರಿಗೆ ಗಾಯ

Update: 2020-04-22 17:46 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ, ಎ.22: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿತರಿಸಲಾಗುತ್ತಿದ್ದ ಪರಿಹಾರ ಸಾಮಗ್ರಿಗಳು ತಮಗೆ ದೊರತಿಲ್ಲವೆಂದು ಆರೋಪಿಸಿ ಪ್ರತಿಭಟನೆಗಿಳಿದ ಸ್ಥಳೀಯ ನಿವಾಸಿಗಳು ಪೊಲೀಸರೊಂದಿಗೆ ಘರ್ಷಣೆಗಿಳಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ತಮಗೆ ಪರಿಹಾರ ಸಾಮಾಗ್ರಿಗಳು ದೊರೆತಿಲ್ಲವೆಂದು ದೂರಿ, ಸ್ಥಳೀಯ ನಿವಾಸಿಗಳು ಬಡುರಿಯಾದ ದಾಸ್‌ ಪಾರಾ ಎಂಬಲ್ಲಿ ಬುಧವಾರ ಬೆಳಗ್ಗಿನಿಂದ ಪ್ರತಿಭಟನೆ ನಡೆಸುತ್ತಿದ್ದರು ಹಾಗೂ ರಸ್ತೆ ತಡೆ ನಿರ್ಮಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡವು ಪ್ರತಿಭಟನಕಾರರನ್ನು ಮನೆಗಳಿಗೆ ತೆರಳುವಂತೆಯೂ ಮತ್ತು ಅಗತ್ಯ ಸಾಮಗ್ರಿಗಳನ್ನು ಒದಗಿಸುವುದಾಗಿಯೂ ಭರವಸೆ ನೀಡಿದರು. ಆದರೆ ಪ್ರತಿಭಟನಕಾರರು ಮಣಿಯದೆ ಇದ್ದಾಗ ಪೊಲೀಸರು ಬಲಪ್ರಯೋಗಿಸಬೇಕಾಗಿ ಬಂತು. ಆಗ ಪೊಲೀಸರೊಂದಿಗೆ ಘರ್ಷಣೆಗಿಳಿದ ಸ್ಥಳೀಯರು ಕಲ್ಲುತೂರಾಟ ನಡೆಸಿದರು. ಘಟನೆಯಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

 ಆನಂತರ ಪೊಲೀಸರು ಲಾಠಿ ಪ್ರಹಾರ ನಡೆಸಿ, ಪ್ರತಿಭಟನಕಾರರನ್ನು ಚದುರಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News