55ಕ್ಕಿಂತ ಹೆಚ್ಚು ವಯಸ್ಸಿನ ಮುಂಬೈ ಪೊಲೀಸರಿಗೆ ಮನೆಯಲ್ಲೇ ಉಳಿದುಕೊಳ್ಳಲು ಸೂಚನೆ

Update: 2020-04-28 07:27 GMT

ಮುಂಬೈ,ಎ.28: ಮುಂಬೈ ಮಹಾನಗರದಲ್ಲಿ ಮೂವರು ಹಿರಿಯ ಪೊಲೀಸರು ಕೊರೋನ ವೈರಸ್‌ಗೆ ಬಲಿಯಾದ ಹಿನ್ನೆಲೆಯಲ್ಲಿ 55ಕ್ಕಿಂತ ಹೆಚ್ಚು ವಯಸ್ಸಿನ ಪೊಲೀಸರನ್ನು ಮನೆಯಲ್ಲಿ ಉಳಿದುಕೊಳ್ಳುವಂತೆ ಸೂಚಿಸಲಾಗಿದೆ.

55ಕ್ಕಿಂತ ಹೆಚ್ಚಿನ ವಯಸ್ಸಿನ ಪೊಲೀಸರು ಕೋವಿಡ್-19 ವಿರುದ್ಧ ಹೋರಾಟದಲ್ಲಿ ಇರುವುದಿಲ್ಲ. ವೈರಸ್ ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ಮನೆಯಲ್ಲೇ ಇರಲು ಅವರಿಗೆ ಸೂಚಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ದಿನಗಳಲ್ಲಿ ಮೂವರು ಪೊಲೀಸರು ಕೊರೋನವೈರಸ್‌ಗೆ ಬಲಿಯಾದ ಬಳಿಕ ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಈ ನಿರ್ಧಾರ ಕೈಗೊಂಡಿದ್ದಾರೆ. ಮೃತಪಟ್ಟಿರುವ ಮೂವರು ಪೊಲೀಸರಿಗೆ 50ಕ್ಕೂ ಅಧಿಕ ವಯಸ್ಸಾಗಿತ್ತು.

55 ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಕೋವಿಡ್-19 ಸೋಂಕಿಗೆ ಒಳಗಾಗುವ ಅಪಾಯ ಅಧಿಕವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆಯಲ್ಲಿ ತಿಳಿಸಿದೆ.

ಟ್ರಾಫಿಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ 56ರ ವಯಸ್ಸಿನ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ವೊಬ್ಬರು ಸೋಮವಾರ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News