ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಡುಗೆಯಾಳಿಗೆ ಕೊರೋನ ದೃಢ; ಕ್ವಾರಂಟೈನ್‍ಗೊಳಗಾದ ನ್ಯಾಯಾಧೀಶರ ಕುಟುಂಬ

Update: 2020-05-15 08:42 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರೊಬ್ಬರ ಮನೆಯ ಅಡುಗೆ ಕೆಲಸದಾಳುವಿಗೆ ಕೊರೋನ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಹಾಗೂ ಅವರ ಕುಟುಂಬ ಸದಸ್ಯರು ಗುರುವಾರ ಸ್ವಯಂ  ಕ್ವಾರಂಟೈನ್‍ಗೊಳಗಾಗಿದ್ದಾರೆ. ನ್ಯಾಯಾಧೀಶರ ಮನೆಯ ಅಡುಗೆಯಾಳು ಮೇ 7ರಂದು ರಜೆಯ ಮೇಲೆ ತೆರಳಿದ್ದು ಈ ಸಂದರ್ಭ ಸೋಂಕು ತಗಲಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ನ್ಯಾಯಾಧೀಶರು ಇತ್ತೀಚಿಗಿನ ತನಕ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದರು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಅವರು ಹಾಗೂ ಅವರ ಕುಟುಂಬ ಸದಸ್ಯರು ಕ್ವಾರಂಟೈನ್‍ಗೊಳಗಾಗಿದ್ದಾರೆ.

ಇದಕ್ಕೂ ಮುನ್ನ  37 ವರ್ಷದ ಸುಪ್ರೀಂ ಕೋರ್ಟ್ ಉದ್ಯೋಗಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿತ್ತು. ಆತನ ಜತೆ ಸಂಪರ್ಕದಲ್ಲಿದ್ದ ಇಬ್ಬರು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರುಗಳು  ಹಾಗೂ ಇತರ ಭದ್ರತಾ ಸಿಬ್ಬಂದಿಯನ್ನು ನಂತರ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News