ಮೇ 31ರವರೆಗೆ ಲಾಕ್ ಡೌನ್ ವಿಸ್ತರಣೆ: ಶೀಘ್ರ ಮಾರ್ಗಸೂಚಿಗಳು ಪ್ರಕಟ
Update: 2020-05-17 13:18 GMT
ಹೊಸದಿಲ್ಲಿ: ಮೇ 31ರವರೆಗೆ ಲಾಕ್ ಡೌನ್ ಅನ್ನು ಮುಂದುವರಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರಾಜ್ಯಗಳಿಗೆ ಸೂಚಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರಕಾರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಿದೆ.
ಲಾಕ್ ಡೌನ್ 4 ಅವಧಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇನ್ನು 2 ವಾರಗಳ ಕಾಲ ಅಂದರೆ ಮೇ 31ರವರೆಗೆ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.