ಕೋವಿಡ್-19 ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಏಕೆ ಉಚಿತವಾಗಿ ಚಿಕಿತ್ಸೆ ನೀಡಬಾರದು: ಸುಪ್ರೀಂಕೋರ್ಟ್

Update: 2020-05-27 10:03 GMT

 ಹೊಸದಿಲ್ಲಿ, ಮೇ 27: ಸರಕಾರದಿಂದ ಉಚಿತವಾಗಿ ಅಥವಾ ಕಡಿಮೆ ಬೆಲೆಯಲ್ಲಿ ಭೂಮಿಯನ್ನು ಪಡೆದಿರುವ ಖಾಸಗಿ ಆಸ್ಪತ್ರೆಗಳು  ಕೋವಿಡ್-19 ರೋಗಿಗಳಿಗೆ ಏಕೆ ಉಚಿತವಾಗಿ ಚಿಕಿತ್ಸೆ ನೀಡಬಾರದು ಎಂದು ಬುಧವಾರ ಸುಪ್ರೀಂಕೋರ್ಟ್ ಕೇಳಿದೆ.

 ಈ ವಿಚಾರದ ಕುರಿತು ಒಂದು ವಾರದೊಳಗೆ ಉತ್ತರ ನೀಡುವಂತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

 ಕೋವಿಡ್ ರೋಗಿಗಳಿಗೆ ಉಚಿತ ಅಥವಾ ಅತ್ಯಲ್ಪ ದರದಲ್ಲಿ ಚಿಕಿತ್ಸೆ ನೀಡಬಲ್ಲ ಆಸ್ಪತ್ರೆಗಳನ್ನು ಗುರುತಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸರಕಾರದಿಂದ ಉಚಿತ ಅಥವಾ ಕಡಿಮೆ ಬೆಲೆಯಲ್ಲಿ ಭೂಮಿ ಪಡೆದಿರುವ ಖಾಸಗಿ ಚಾರಿಟೇಬಲ್ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಒದಗಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ತಿಳಿಸಿದೆ.

 ವಲಸಿಗ ಕಾರ್ಮಿಕರ ಬಿಕ್ಕಟ್ಟು ಇಂದು ಕೂಡ ಮುಂದುವರಿದಿದ್ದು, ಹೆಚ್ಚಿನವರು ದೇಶದ ವಿವಿಧ ಭಾಗಗಳಲ್ಲಿ ರಸ್ತೆಗಳು, ಹೆದ್ದಾರಿಗಳು, ರೈಲ್ವೇ ನಿಲ್ದಾಣಗಳು ಹಾಗೂ ರಾಜ್ಯದ ಗಡಿಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಸಾಕಷ್ಟು ಸಾರಿಗೆ ವ್ಯವಸ್ಥೆ,ಆಹಾರ ಹಾಗೂ ಆಶ್ರಯವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಕ್ಷಣವೇ ಉಚಿತವಾಗಿ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News