ಬೆಳ್ತಂಗಡಿ : ಹೃದಯಾಘಾತದಿಂದ ಯೋಧ ನಿಧನ
Update: 2020-06-13 17:01 GMT
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಲಿಂಗಿರ ಮನೆ ನಿವಾಸಿ, ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ(34) ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಜೆಯಲ್ಲಿ ಊರಿಗೆ ಬಂದಿದ್ದ ಅವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು.
ಅಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿ ಇರುವಾಗಲೇ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭಿಸಿದೆ. ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.