ಉಡುಪಿ: ಗುರುವಾರ 27 ಕೇಂದ್ರಗಳಲ್ಲಿ ದ್ವಿ. ಪಿಯುಸಿ ಇಂಗ್ಲಿಷ್ ಪರೀಕ್ಷೆ

Update: 2020-06-17 12:18 GMT

ಉಡುಪಿ, ಜೂ.17: ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂ ಡಲಾಗಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಉಡುಪಿ ಜಿಲ್ಲೆಯ ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 10:15ರಿಂದ ಅಪರಾಹ್ನ 1:30ರವರೆಗೆ ನಡೆಯಲಿದ್ದು, ಇದಕ್ಕಾಗಿ ಸಂಪೂರ್ಣ ಮುಂಜಾಗ್ರತಾ ಕ್ರಮಗಳೊಂದಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 6414 ಬಾಲಕರು ಹಾಗೂ 7149 ಬಾಲಕಿಯರು ಸೇರಿದಂತೆ ಒಟ್ಟು 13,563 ಮಂದಿ ನಾಳಿನ ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿ ಕೊಂಡಿದ್ದಾರೆ. ಕೋವಿಡ್-19ರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಗ್ಗೆ 9:00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ 6414 ಬಾಲಕರು ಹಾಗೂ 7149 ಬಾಲಕಿಯರು ಸೇರಿದಂತೆ ಒಟ್ಟು 13,563 ಮಂದಿ ನಾಳಿನ ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿ ಕೊಂಡಿದ್ದಾರೆ. ಕೋವಿಡ್-19ರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಗ್ಗೆ 9:00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯ ಮಾಹಿತಿ ಯನ್ನು ಪಡೆಯಲು ಸಾರ್ವಜನಿಕರಿಗೆ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸ ಲಾಗಿದೆ. ಸಹಾಯವಾಣಿ ಸಂಖ್ಯೆ: 0820-2575891 ಮೊ: 8073518118.

91 ಬಸ್‌ಗಳ ವ್ಯವಸ್ಥೆ: ಜಿಲ್ಲೆಯಲ್ಲಿ ಸಂಪೂರ್ಣ ಬಸ್ ಸಂಚಾರ ಆರಂಭ ಗೊಳ್ಳದೇ ಇರುವುದರಿಂದ ಒಟ್ಟು 69 ಮಾರ್ಗಗಳಲ್ಲಿ 91 ಕೆಎಸ್ಸಾರ್ಟಿಸಿ ಬಸ್‌ಗಳನ್ನು ವಿದ್ಯಾರ್ಥಿಗಳನ್ನು ಕರೆತರಲು ಬಳಸಲಾಗುತ್ತಿದೆ. ಈ ಬಸ್‌ಗಳಲ್ಲಿ ಪ್ರತಿ ಮಾರ್ಗದಲ್ಲಿ ಓರ್ವ ಉಪನ್ಯಾಸಕರು ಮಾರ್ಗಾಧಿಕಾರಿ ಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಹಾಗೂ ಪ್ರತಿ ತಾಲೂಕಿನಲ್ಲಿ 04 ಜನ ಪ್ರಾಂಶುಪಾಲರು ನೋಡಲ್ ಅಧಿಕಾರಿಗಳಾಗಿ ಬಸ್ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ. ವಿದ್ಯಾರ್ಥಿ ಗಳು ಮಳೆಗಾಲದ ಅವಧಿಯಲ್ಲಿ ಅತ್ಯಂತ ಕುಗ್ರಾಮ ಹಾಗೂ ದೂರದ ಪ್ರದೇಶಗಳಿಂದ ಪರೀಕ್ಷಾ ಕೇಂದ್ರ ಗಳಿಗೆ ಬರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಸಾಧ್ಯವಾಗದಿದ್ದರೆ ಅಥವಾ ಬಸ್ ತಪ್ಪಿಸಿಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಸರಕಾರಿ ವಾಹನದಲ್ಲಿ ಕರೆದುಕೊಂಡು ಬರಲು ಎಲ್ಲಾ ತಾಲೂಕುಗಳಲ್ಲಿ ಸರಕಾರಿ ಕಚೇರಿಯ ವಾಹನಗಳು ಸಜ್ಜಾಗಿರಿಸಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂರು ಪರೀಕ್ಷಾ ಕೇಂದ್ರಗಳೆಂದರೆ: ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ (847ವಿದ್ಯಾರ್ಥಿಗಳು), ಭಂಡಾರ್ಕಸ್ ಪದವಿ ಪೂರ್ವ ಕಾಲೇಜು ಕುಂದಾಪುರ (844) ಹಾಗೂ ಎಂಜಿಎಂ ಪದವಿ ಪೂರ್ವ ಕಾಲೇಜು ಉಡುಪಿ (771). ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆ: 163. ಉಡುಪಿ ಜಿಲ್ಲೆಯಿಂದ ಹೊರ ಜಿಲ್ಲೆಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ: 1344 ಆಗಿದೆ.

ಕಾಯ್ದಿರಿಸಿದ ಹೆಚ್ಚುವರಿ ಪರೀಕ್ಷಾ ಕೇಂದ್ರ: ಕೋವಿಡ್-19 ಹಿನ್ನಲೆ ಯಲ್ಲಿ ಯಾವುದಾದರೂ ಪರೀಕ್ಷಾ ಕೇಂದ್ರ ಕಂಟೈನ್ಮೆಂಟ್ ರೆನ್ ಆಗಿ ಪರಿವರ್ತನೆಯಾದರೆ ಮೂರು ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಲಾಗಿದೆ. ಅವುಗಳೆಂದರೆ ಉಡುಪಿ ತಾಲೂಕಿನಲ್ಲಿ ಡಾ: ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ. ಕಾರ್ಕಳ ತಾಲೂಕಿನಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ಕುಂದಾಪುರ ತಾಲೂಕಿನಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ.

ಪರೀಕ್ಷಾ ಕೇಂದ್ರದ ಸ್ಯಾನಿಟೈಜ್: ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಣಾ ದ್ರಾವಣ ಸಿಂಪಡಿಸಿ ಪರೀಕ್ಷಾ ಕೇಂದ್ರದ ಕೊಠಡಿ ಮತ್ತು ಡೆಸ್ಕ್‌ಗಳನ್ನು ಸ್ವಚ್ಛಗೊಳಿಸಿ ಶುದ್ಧೀಕರಿಸಲಾಗಿದೆ. ಪರೀಕ್ಷಾ ಕೇಂದ್ರದ ಒಳಗೆ ಬರುವಾಗ ವೈದ್ಯಕೀಯ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ನಿಂದ ಪರೀಕ್ಷಿಸಿ, ನೀರು ಮತ್ತು ಸಾಬೂನಿನಿಂದ ಕೈತೊಳೆದು ಪರೀಕ್ಷಾ ಕೊಠಡಿಗೆ ಮಾಸ್ಕ್ ಧರಿಸಿಕೊಂಡು ಪ್ರವೇಶ ನೀಡಲಾಗುವುದು.

ಜ್ವರ/ಕೆಮ್ಮು ನೆಗಡಿ ಇತ್ಯಾದಿ ಲಕ್ಷಣಗಳು ಕಂಡುಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಅವರನ್ನು ಪ್ರತ್ಯೇಕವಾದ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ ಎಂದು ಜಿಲ್ಲಾ ಉಪನಿರ್ದೇಶಕ ಭಗವಂತ ಕಟ್ಟಿಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News