ಬೆಂಗಳೂರು: ಮೂವರು ಪೊಲೀಸರಿಗೆ ಕೊರೋನ ದೃಢ

Update: 2020-06-18 16:57 GMT

ಬೆಂಗಳೂರು, ಜೂ.18: ಇಲ್ಲಿನ ಸಿಟಿ ಮಾರ್ಕೆಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಪೊಲೀಸರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. ಸೋಂಕಿತ ಪೊಲೀಸರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.

ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪೊಲೀಸರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಮೂವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. 

ಆರೋಪಿಗೆ ಕೊರೋನ: ವೈಟ್‍ಫೀಲ್ಡ್ ವಿಭಾಗದ ಮಾರತ್ತಹಳ್ಳಿ ಠಾಣಾ ಪೊಲೀಸರು ತಮಿಳುನಾಡು ಮೂಲದ ವ್ಯಕ್ತಿಯನ್ನು ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದ್ದರು. ಬಂಧನದ ಬಳಿಕ ಆರೋಪಿಯಲ್ಲಿ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಸದ್ಯ ಆರೋಪಿ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೊಲೀಸರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದು, 40 ಮಂದಿ ಪೊಲೀಸ್ ಸಿಬ್ಬಂದಿಗೆ ಆರೋಗ್ಯದ ಕುರಿತು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News