ಪುತ್ತೂರು : ಶಂಕಿತ ಡೆಂಗಿ ಜ್ವರಕ್ಕೆ ಮಹಿಳೆ ಬಲಿ

Update: 2020-06-19 14:59 GMT

ಪುತ್ತೂರು: ಡೆಂಗಿ ಜ್ವರದಿಂದ ಬಳಲುತ್ತಿದ್ದರೆನ್ನಲಾದ ಪುತ್ತೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. 

ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಝೀರ್ ಮಾಸ್ಟರ್ ಎಂಬವರ ಪತ್ನಿ ನಸೀಮಾ (32) ಮೃತ ಮಹಿಳೆ. ಅವರು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಪುತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಉಲ್ಬಣಗೊಂಡ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News