ಮಾಳದಲ್ಲಿ ಡೆಂಗಿ ವಿರೋಧಿ ದಿನಾಚರಣೆ

Update: 2020-06-23 12:00 GMT

ಉಡುಪಿ, ಜೂ.23: ಡೆಂಗಿ ಹಾಗೂ ಇನ್ನಿತರ ಸೊಳ್ಳೆಗಳಿಂದ ಹರಡುವ ಕಾಯಿಲೆ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, ಅದಕ್ಕೆ ಬೇಕಾದ ನಿಯಂತ್ರಣ ಕ್ರಮಗಳಿಗೆ ಆರೋಗ್ಯ ಇಲಾಖೆ, ಪಂಚಾಯತ್‌ರಾಜ್ ಇಲಾಖೆ, ಸ್ಥಳೀಯ ಸಂಸ್ಥೆಗಳ ಸೇವೆ ಸಹಕಾರ ಅಗತ್ಯತೆವಿದೆ ಎಂದು ಮಾಳ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ಹೆಗ್ಡೆ ಹೇಳಿದ್ದಾರೆ.

ಮಾಳದ ರಾಮಮಂದಿರ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಡಳಿತ, ಜಿಪಂ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ, ಕೆರ್ವಾಶೆ ಸೇವಾ ಸಹಕಾರಿ ನಿಯಮಿತ ಬ್ಯಾಂಕ್ ಮಾಳ, ಗ್ರಾಪಂ ಮಾಳ ಇವರ ಸಹಯೋಗದಲ್ಲಿ ನಡೆದ ಡೆಂಗಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾದ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಡೆಂಗಿ ಕಾಯಿಲೆಯ ಲಕ್ಷಣಗಳು ಇತರ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಸೊಳ್ಳೆ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮಗಳು, ಕೊರೋನ ವೈರಸ್ ಕುರಿತು ವಿವರಗಳನ್ನು ನೀಡಿದರು. ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಳ ಗ್ರಾಪಂ ಉಪಾಧ್ಯಕ್ಷೆ ಸುಮಲತಾ, ಸದಸ್ಯರಾದ ಹರಿಶ್ಚಂದ್ರ ತೆಂಡೂಲ್ಕರ್, ರಾಮ್ ಶೇರಿಗಾರ್, ಅಶೋಕ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತ ರಿದ್ದರು.

ಹಿರಿಯ ಆರೋಗ್ಯ ಸಹಾಯಕ ಶಿವರಾಮ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಸಹಾಯಕ ವಸಂತ್ ಶೆಟ್ಟಿ ಮಾಳ ಸ್ವಾಗತಿಸಿ ಅಶೋಕ್ ವಂದಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News