ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

Update: 2020-06-25 16:38 GMT

ಉಡುಪಿ, ಜೂ.25: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಅಹ್ವಾನದ ದಿನಾಂಕಗಳನ್ನು ಈ ಮುಂದಿನಂತೆ ವಿಸ್ತರಿಸಲಾಗಿದೆ. ಅರ್ಹತಾ ಷರತ್ತುಗಳಲ್ಲಿ (ವಯೋಮಿತಿ ಸೇರಿದಂತೆ) ಯಾವುದೇ ಬದಲಾವಣೆ ಗಳಿರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಆರ್‌ಎಸ್‌ಐ (ಸಿಎಆರ್/ಡಿಎಆರ್) 45 ಹುದ್ದೆಗಳು, ಅರ್ಜಿ ಸಲ್ಲಿಸಲು ಜುಲೈ 16 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜುಲೈ 18 ಕೊನೆಯ ದಿನವಾಗಿದೆ. ಆರ್‌ಎಸ್‌ಐ (ಕೆಎಸ್‌ಆರ್‌ಪಿ) 40 ಹುದ್ದೆಗಳು, ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜುಲೈ 21 ಕೊನೆಯ ದಿನವಾಗಿದೆ. ಎಸ್‌ಐ (ಕೆಎಸ್‌ಐಎಸ್‌ಎಫ್) 51 ಹುದ್ದೆಗಳು, ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಸಲು ಜುಲೈ 21 ಕೊನೆಯ ದಿನವಾಗಿದೆ. ಪಿಎಸ್‌ಐ (ವೈರ್‌ಲೆಸ್) 26 ಹುದ್ದೆಗಳು, ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ, ಶುಲ್ಕ ಪಾವತಿಸಲು ಜುಲೈ 21 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News