ಬೆಂಗಳೂರು: ಕೊರೋನ ಸೋಂಕಿಗೆ ಎಎಸ್ಸೈ ಬಲಿ

Update: 2020-06-28 14:57 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.28: ಕೊರೋನ ಸೋಂಕಿನಿಂದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್(ಎಎಸ್ಸೈ) ಒಬ್ಬರು ಮೃತಪಟ್ಟಿರುವ ಘಟನೆ ರವಿವಾರ ಜರುಗಿದೆ.

ನಗರದ ವೈಟ್‍ಫೀಲ್ಡ್ ಪೊಲೀಸ್ ಠಾಣೆಯ 57 ವರ್ಷ ವಯಸ್ಸಿನ ಎಎಸ್ಸೈ ಅವರನ್ನು ಜೂ.10ರಂದು ಮನೆಗೆ ಕಳುಹಿಸಲಾಗಿತ್ತು. ಇಲ್ಲಿನ ಕಗ್ಗದಾಸನಪುರದ ಮಲ್ಲೇಶಪಾಳ್ಯದ ಮನೆಯಲ್ಲಿದ್ದ ಎಎಸ್ಸೈ ಜ್ವರ, ಶೀತ ಕೆಮ್ಮಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಎಸ್ಸೈ ಅವರಿಗೆ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರ ಕುಟುಂಬದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂ.15ರಂದು ವಿವಿಪುರಂನ ಎಎಸ್ಸೈ ಕೊರೋನ ಸೋಂಕಿನಿಂದ ಮೃತಪಟ್ಟ ಬಳಿಕ ಜೂ.19 ರಾತ್ರಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ 55 ವರ್ಷದ ಮುಖ್ಯ ಪೇದೆ ಹಾಗೂ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆಯ ಎಎಸ್ಸೈ ಜೂ.20ರಂದು ಸೋಂಕಿನಿಂದ ಸಾವನ್ನಪ್ಪಿದ್ದರು. ತದನಂತರ, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಇದೇ ಸೋಂಕಿನಿಂದ ಕೊನೆಯುಸಿರೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News