ಉತ್ತರ ಪ್ರದೇಶದ ಆಯುಷ್ ಸಚಿವರಿಗೆ ಕೊರೋನ ಪಾಸಿಟಿವ್

Update: 2020-07-05 03:56 GMT
ಸಾಂದರ್ಭಿಕ ಚಿತ್ರ

ಲಕ್ನೋ: ಉತ್ತರ ಪ್ರದೇಶ ಸರ್ಕಾರದ ಆಯಷ್ ಸಚಿವ ಧರ್ಮಸಿಂಗ್ ಸೈನಿ ಅವರಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಅವರ ಕೋವಿಡ್-19 ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದ್ದು, ಸಹರಣಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೈನಿಯವರ ಕುಟುಂಬ ಸದಸ್ಯರೆಲ್ಲರನ್ನೂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಶುಕ್ರವಾರ ಯೋಗಿ ಆದಿತ್ಯನಾಥ್ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ರಾಜೇಂಧ್ರ ಪ್ರತಾಪ್ ಸಿಂಗ್ ಅವರಿಗೂ ಕೊರೋನ ಸೋಂಕು ದೃಢಪಟ್ಟಿತ್ತು. ಇದೀಗ ಸೈನಿಯವರಿಗೂ ಸೋಂಕು ದೃಢಪಟ್ಟಿದ್ದು, ಇಬ್ಬರು ಸಚಿವರಿಗೆ ಸೋಂಕು ತಗಲಿದಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News