ಸುರಕ್ಷತಾ ಕ್ರಮಗಳನ್ನು 1 ವರ್ಷದವರೆಗೆ ವಿಸ್ತರಿಸಿದ ಕೇರಳ: ಮಾಸ್ಕ್ ಧರಿಸದಿದ್ದರೆ 10 ಸಾವಿರ ರೂ. ದಂಡ
Update: 2020-07-05 14:12 GMT
ತಿರುವನಂತಪುರಂ: ಕೊರೋನ ವೈರಸ್ ಗೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗುವುದು ಎಂದು ಕೇರಳ ಸರಕಾರವು ಇಂದು ಹೇಳಿದೆ.
ಕೇರಳದಲ್ಲಿ ಇನ್ನು ಒಂದು ವರ್ಷ ಕಾಲ ಮಾಸ್ಕ್ ಅಥವಾ ಮುಖಮುಚ್ಚುವ ವಸ್ತ್ರಗಳನ್ನು ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಕಡ್ಡಾಯವಾಗಿರಲಿದೆ.
ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸಬೇಕು ಮತ್ತು 6 ಅಡಿಗಳ ಸುರಕ್ಷಿತ ಅಂತರವನ್ನು ಕಾಪಾಡಬೇಕಾಗಿದೆ. ಮದುವೆ ಕಾರ್ಯಕ್ರಮಗಳಲ್ಲಿ 50 ಮತ್ತು ಅಂತ್ಯಸಂಸ್ಕಾರಗಳಲ್ಲಿ 20 ಜನರು ಮಾತ್ರ ಭಾಗವಹಿಸಬಹುದಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ವರದಿಯಾಗಿದೆ.