ಭಾರತದಲ್ಲಿ 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

Update: 2020-07-07 06:03 GMT

 ಹೊಸದಿಲ್ಲಿ, ಜು.7: ದೇಶಾದ್ಯಂತ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ 22,252 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಇದುವರೆಗೆ ಒಟ್ಟು 7,19,665ಜನರಿಗೆ ಸೋಂಕು ತಗಲಿದೆ. ಇದರಲ್ಲಿ 4,39, 947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20, 160 ಮಂದಿ ಮೃತಪಟ್ಟಿದ್ದು, ಇನ್ನೂ 2,59, 557 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,368 ಹೊಸ ಪ್ರಕರಣಗಳು ಖಚಿತವಾಗಿವೆ. 204 ಜನ ಸಾವಿಗೀಡಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News