ಪತ್ರಕರ್ತ ವಿನೋದ್ ದುವಾ ಜುಲೈ 15ರವರೆಗೆ ನಿರಾಳ

Update: 2020-07-07 16:32 GMT

ಪತ್ರಕರ್ತ ವಿನೋದ್ ದುವಾ ಜುಲೈ 15ರವರೆಗೆ ನಿರಾಳ

ಹೊಸದಿಲ್ಲಿ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಹಿರಿಯ ಪತ್ರಕರ್ತ ವಿನೋದ್ ದುವಾ ಅವರಿಗೆ ನೀಡಿರುವ ಕಾನೂನಾತ್ಮಕ ರಕ್ಷಣೆಯನ್ನು ಸುಪ್ರೀಂಕೋರ್ಟ್ ಈ ತಿಂಗಳ 15ರವರೆಗೆ ವಿಸ್ತರಿಸಿದೆ.

ಯೂಟ್ಯೂಬ್ ಶೋ ಒಂದಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಬಿಜೆಪಿ ಮುಖಂಡರೊಬ್ಬರು ದುವಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿತು. ಮುಂದಿನ ಬುಧವಾರ ಪ್ರಕರಣದ ವಿಚಾರಣೆ ನಡೆಯುವವರೆಗೆ ದುವಾ ಅವರನ್ನು ಬಂಧಿಸದಂತೆ ಹಿಮಾಚಲ ಪ್ರದೇಶ ಪೊಲೀಸರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ದುವಾ ಈಗಾಗಲೇ ವರ್ಚುವಲ್ ಮಾಧ್ಯಮದ ಮೂಲಕ ಪೊಲೀಸ್ ತನಿಖೆಯಲ್ಲಿ ಪಾಲ್ಗೊಂಡಿದ್ದು, ಈ ಪ್ರಕರಣದಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯ ಇಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿತು. ಇದಕ್ಕೂ ಮುನ್ನ ರವಿವಾರ ಸುಪ್ರೀಂಕೋರ್ಟ್ ಕಲಾಪ ನಡೆಸಿ, ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ದುವಾ ಅವರನ್ನು ಬಂಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News