ಅತಿ ವೇಗದಲ್ಲಿ ಬೈಕ್ ಚಾಲನೆ ಆರೋಪ: ಸಾಫ್ಟ್ ವೇರ್ ಇಂಜಿನಿಯರ್ ಬಂಧನ

Update: 2020-07-21 11:49 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.21: ಅತಿ ವೇಗದಲ್ಲಿ ಬೈಕ್ ಚಾಲನೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಮುನಿಯಪ್ಪ(29) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಕೊರೋನ ಸೋಂಕಿನ ಪ್ರಮಾಣ ತಗ್ಗಿಸುವ ಸಲುವಾಗಿ ಜಾರಿಯಾಗಿದ್ದ ಲಾಕ್‍ಡೌನ್ ವೇಳೆ ತನ್ನ ದುಬಾರಿ ಬೈಕ್‍ನಲ್ಲಿ ಜಾಲಿ ರೈಡ್ ಹೋಗಿದ್ದ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಸ್ತೆಯಲ್ಲಿ ಅತೀ ವೇಗದಲ್ಲಿ ಆತ ಬೈಕ್ ಚಾಲನೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.

ಈ ಹಿನ್ನೆಲೆ ಸಿಸಿಬಿ ಪೊಲೀಸರು ಮುನಿಯಪ್ಪನನ್ನು ಬಂಧಿಸಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News