ಕಾಮೇಗೌಡರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಕುಮಾರಸ್ವಾಮಿ ಒತ್ತಾಯ

Update: 2020-07-25 16:41 GMT

ಬೆಂಗಳೂರು, ಜು.25: ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಯನ್ನು ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮನ್ ಕಿ ಬಾತ್‍ನಲ್ಲಿ ಪ್ರಧಾನಿಯು ಕಾಮೇಗೌಡರ ಬಗ್ಗೆ ಕೊಂಡಾದಿದ್ದಾರೆ. ಮುಖ್ಯಮಂತ್ರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನ ಶೂಲಕ್ಕೆ ಏರಿಸಿದರೆ ಸಾಲದು, ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರಕಾರ ಮುಂದಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಕಾಮೇಗೌಡರಿಗೆ ಸೂಕ್ತ ಚಿಕಿತ್ಸೆ: ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೆ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News