ಕಾರ್ಕಳ ಶಾಸಕರಿಂದ ಸಿಮೆಂಟ್ ಹಗರಣ ಆರೋಪ: ತನಿಖೆಗೆ ಆಗ್ರಹಿಸಿ ಸರಕಾರಕ್ಕೆ ಕಾಂಗ್ರೆಸ್ ಮನವಿ

Update: 2020-07-28 15:08 GMT

ಉಡುಪಿ, ಜು.28: ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ದದ ಅಕ್ರಮ ಸಿಮೆಂಟ್ ಹಗರಣ ಆರೋಪದ ಬಗ್ಗೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸು ವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್, ಜಿಲ್ಲಾಧಿಕಾರಿಗಳ ಮೂಲಕ ಇಂದು ಸರಕಾರಕ್ಕೆ ಮನವಿ ಸಲ್ಲಿಸಿತು.

ಇತ್ತೀಚಿಗೆ ಮಾಧ್ಯಮಗಳಲ್ಲಿ ವರದಿಯಾದಂತೆ ಸುನಿಲ್ ಕುಮಾರ್ ತನ್ನ ಖಾಸಗಿ ಕಛೇರಿಯ ನಿರ್ಮಾಣಕ್ಕೆ ಸರಕಾರಿ ಕಾಮಗಾರಿಗಳಿಗೆ ಬಳಸಲ್ಪಡುವ ಸಿಮೆಂಟನ್ನು ಬಳಸಿರುವ ಬಗ್ಗೆ ವಿಡಿಯೋ ಇದ್ದು ಇದೊಂದು ಅಕ್ರಮ ಸಿಮೆಂಟ್ ಹಗರಣ ಎನ್ನುವುದರ ಬಗ್ಗೆ ಸಂಶಯ ಇದೆ ಎಂದು ಕಾಂಗ್ರೆಸ್ ಮನವಿಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ, ಕೆಪಿಸಿಸಿ ಮುಖಂಡರಾದ ಮುರಳಿ ಶೆಟ್ಟಿ, ಎಂ.ಎ. ಗಫೂರ್, ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ, ನೀರೇ ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ.ಅಮೀನ್, ವೈ ಸುಕುಮಾರ್, ಕಾರ್ಕಳ ಬ್ಲಾಕ್ ಅಧ್ಯಕ್ಷ ಶೇಖರ ಮಡಿವಾಳ, ಲೀಗಲ್ ಸೆಲ್ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಇಸ್ಮಾಯಿಲ್ ಅತ್ರಾಡಿ, ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಪುರಸಭಾ ಸದಸ್ಯರಾದ ಶುಭದ್ ರಾವ್, ಮಧುರಾಜ್ ಶೆಟ್ಟಿ, ಯತೀಶ್ ಕರ್ಕೇರ, ನಿತ್ಯಾನಂದ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಎಂ.ಪಿ. ಮೊಯಿದಿನಬ್ಬ, ಯೋಗೀಶ್ ನಯನ್ ಇನ್ನ, ಕೃಷ್ಣ ಶೆಟ್ಟಿ ನಲ್ಲೂರ್, ಅಜಿತ್ ಹೆಗ್ಡೆ ಮಾಳಾ, ಪ್ರದೀಪ್ ಶೆಟ್ಟಿ, ಹಮದ್, ಝಮೀರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News