ಉಡುಪಿ ಜಿಲ್ಲೆಯಲ್ಲಿ ಮತ್ತೆ 400 ಗಡಿದಾಟಿದ ಕೊರೋನ ಪಾಸಿಟಿವ್

Update: 2020-08-18 13:59 GMT

ಉಡುಪಿ, ಆ.18: ಜಿಲ್ಲೆಯಲ್ಲಿ ಮತ್ತೆ ಮಂಗಳವಾರ ಕೋವಿಡ್-19 ಪಾಸಿಟಿವ್ ಪ್ರಕರಣ 400ರ ಗಡಿ ದಾಟಿದೆ. ಇಂದು ಒಟ್ಟು 421 ಮಂದಿಯಲ್ಲಿ  ಕೋವಿಡ್ -19 ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 8,666ನ್ನು ತಲುಪಿದೆ. ದಿನದಲ್ಲಿ 1,200 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಮಂಗಳವಾರ ಕೋವಿಡ್ ಪಾಸಿಟಿವ್ ಪತ್ತೆಯಾದ 421 ಮಂದಿಯಲ್ಲಿ ಉಡುಪಿ ತಾಲೂಕಿನ 203 ಮಂದಿ, ಕುಂದಾಪುರ ತಾಲೂಕಿನ 158 ಹಾಗೂ ಕಾರ್ಕಳ ತಾಲೂಕಿನ 50 ಮಂದಿ ಸೇರಿದ್ದಾರೆ. ಉಳಿದಂತೆ ಹೊರಜಿಲ್ಲೆಯ ಒಟ್ಟು 10 ಮಂದಿ ಚಿಕಿತ್ಸೆಗೆ ಇಲ್ಲಿಗೆ ಬಂದು ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 224 ಮಂದಿ ಪುರುಷರು ಹಾಗೂ 197 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 123 ಪುರುಷರು ಹಾಗೂ 156 ಮಹಿಳೆಯರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ.ಸೂಡ ತಿಳಿಸಿದರು.

ಇಂದು ಪಾಸಿಟಿವ್ ದೃಢಗೊಂಡ 421 ಮಂದಿಯಲ್ಲಿ 150 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 90 ಮಂದಿ ಶೀತಜ್ವರದಿಂದ, 17 ಮಂದಿ ಉಸಿರಾಟ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶೀಯ ಪ್ರವಾಸದಿಂದ ಮರಳಿದ ಆರು ಮಂದಿಯಲ್ಲೂ ಸೋಂಕು ಪತ್ತೆ ಯಾಗಿದ್ದು, ಉಳಿದಂತೆ 158 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆ ಯಾಗಬೇಕಿದೆ ಎಂದರು.

321 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಮಂಗಳವಾರ 321 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 177 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 144 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 5951 ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2637 ಮಂದಿ ಚಿಕಿತ್ಸೆಯಲ್ಲಿದ್ದು, ಇವರಲ್ಲಿ 1321 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1316 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1837 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಮಂಗಳವಾರ 1837 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1098 ಮಂದಿ, ಕೋವಿಡ್ ಸಂಪರ್ಕಿತರು 327 ಮಂದಿ ಇದ್ದರೆ, ಉಸಿರಾಟ ತೊಂದರೆಯ 10 ಮಂದಿ, ಶೀತಜ್ವರ ದಿಂದ ಬಳಲುವ 48 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 354 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪರೀಕ್ಷೆಗಾಗಿ ಪಡೆದ 1837 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 57,576ಕ್ಕೇರಿದೆ. ಇವುಗಳಲ್ಲಿ ಈವರೆಗೆ 47,824 ನೆಗೆಟಿವ್, 8666 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 79 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 1086 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಇಂದು 421 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಒಟ್ಟು 126 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 295 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು 2974 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News