ಎಸ್ಸಿ-ಎಸ್ಟಿ ಕ್ರೀಡಾಪಟುಗಳಿಗೆ ಸಹಾಯಧನ: ಅರ್ಜಿ ಆಹ್ವಾನ

Update: 2020-08-18 15:48 GMT

ಮಂಗಳೂರು, ಆ.18: ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

ಎಸ್ಸಿ-ಎಸ್ಟಿಯ ಅರ್ಹ ಕ್ರೀಡಾಪಟುಗಳು ಆ.31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು (ದೂ.ಸಂ.: 0824-2451264) ಇಲ್ಲಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News