ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಪ್ರಕರಣ ; ಆರೋಪಿ ವಸಂತ ಸೆರೆ : ಡಿಸಿಪಿ ವಿನಯ್ ಗಾಂವ್ಕರ್

Update: 2020-08-20 06:15 GMT

ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ ಹುಸಿಬಾಂಬ್ ಕರೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ (33) ಬಂಧಿತ ಆರೋಪಿ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಆರೋಪಿ ವಸಂತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು, ವಶಕ್ಕೆ ಪಡೆದಿದ್ದ ಆತನನ್ನು ತೀವ್ರ ವಿಚಾರಣೆ ಬಳಿಕ ತಡರಾತ್ರಿ ಬಂಧಿಸಲಾಗಿದೆ. ನಿನ್ನೆ ಮಧ್ಯಾಹ್ನ ಆತ ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಸಂದೇಶ ಮತ್ತು ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದ. ವಿಮಾನ ನಿಲ್ದಾಣ ತಪಾಸಣೆ ಬಳಿಕ ಅದು ಹುಸಿ ಕರೆ ಎಂದು ದೃಢಪಟ್ಟಿತ್ತು. ಘಟನೆ ಹಿನ್ನೆಲೆಯಲ್ಲಿ ಆರೋಪಿಯನ್ನು ನಿನ್ನೆ ಸಂಜೆ ವೇಳೆಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News