ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ 108 ಕೊರೋನ ಪ್ರಕರಣ ದೃಢ

Update: 2020-08-20 14:57 GMT

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ 108 ಕೊರೋನ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಈ ಮೂಲಕ ಜಿಲ್ಲೆಯ ಕೊರೋ ಸೋಂಕಿತರ ಸಂಖ್ಯೆ 3687ಕ್ಕೆ ಏರಿಕೆಯಾಗಿದೆ. 

ಇದರಲ್ಲಿ 2781 ರೋಗಿಗಳು ಗುಣಮುಖರಾಗಿದ್ದಾರೆ. ಸಕ್ರಿಯ 868 ಪ್ರಕರಣಗಳ ಪೈಕಿ 243 ಜನರಿಗೆ ಅವರವರ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 625 ಜನರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ಒಂದೇ ದಿನ ಮೂವರು ಕೊರೋನ ಸೋಂಕಿತರು ಸಾವನ್ನಪ್ಪಿದ್ದಾರೆ. ಶಿರಸಿಯಲ್ಲಿ 1 ಹಾಗೂ ಹೊನ್ನಾವರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

115 ಮಂದಿ ಗುಣಮುಖ: ಕೊರೋನ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಗುರುವಾರ 115ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಕಾರವಾರದಲ್ಲಿ 12, ಅಂಕೋಲಾದಲ್ಲಿ 26, ಹೊನ್ನಾವರದಲ್ಲಿ 12, ಭಟ್ಕಳದಲ್ಲಿ 11, ಶಿರಸಿಯಲ್ಲಿ 19, ಸಿದ್ದಾಪುರದಲ್ಲಿ 2 ಹಾಗೂ ಹಳಿಯಾಳದಲ್ಲಿ 27, ಜೊಯಿಡಾದಲ್ಲಿ 6 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News