ಅತಿಥಿ ಉಪನ್ಯಾಸರಿಂದ ಅರ್ಜಿ ಆಹ್ವಾನ

Update: 2020-08-23 14:55 GMT

ಬೆಂಗಳೂರು, ಆ.23: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ಅಧ್ಯಯನ ವಿಭಾಗಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಯುಜಿಸಿ/ಎಐಸಿಟಿಇ ಮಾನದಂಡಗಳನ್ನು ಪೂರೈಸಿದ್ದು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಅಂಕಪಟ್ಟಿ ಮತ್ತು ಇತರೆ ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರುಗಳಿಗೆ ಸೆ.5 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅತಿಥಿ ಉಪನ್ಯಾಸಕರ ಅವಶ್ಯಕತೆ ಇರುವ ವಿಭಾಗಗಳ ಪಟ್ಟಿಯನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.bangaloreuniversity.ac.inರಲ್ಲಿ ನೋಡಿ ತಿಳಿದುಕೊಳ್ಳಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News