ದುಬಾರಿ ಬೈಕ್‍ಗಳ ಕಳ್ಳತನ: ಆರೋಪಿ ಬಂಧನ

Update: 2020-08-23 17:41 GMT

ಬೆಂಗಳೂರು, ಆ.23: ದುಬಾರಿ ಬೈಕ್‍ಗಳನ್ನೇ ಟಾರ್ಗೆಟ್ ಮಾಡಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಪೀಣ್ಯ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಣಿಗಲ್ ಮೂಲದ ನಾಗಸಂದ್ರ ನಿವಾಸಿಯಾಗಿರುವ ವೆಂಕಟೇಶ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಇನ್ನು ಕಳ್ಳತನ ಮಾಡಿದ ಬೈಕ್ ಗಳನ್ನು ಮಾರಾಟ ಮಾಡಲು ಮುಂದಾಗಿದ್ದ ಮಾಹಿತಿ ಸಂಗ್ರಹಿಸಿದ ಪೀಣ್ಯ ಪೊಲೀಸರು ಆರೋಪಿಯನ್ನು ಸೆರೆಹಿಡಿದು, 3.5 ಲಕ್ಷ ರೂಪಾಯಿ ಮೌಲ್ಯದ 9 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News