ಉಡುಪಿ ಜಿಲ್ಲೆಯಲ್ಲಿ 217 ಮಂದಿಯಲ್ಲಿ ಕೊರೋನ ಪಾಸಿಟಿವ್ ; ಇಬ್ಬರು ಮೃತ್ಯು

Update: 2020-08-25 13:45 GMT

ಉಡುಪಿ, ಆ. 25: ನೋವೆಲ್ ಕೊರೋನ ವೈರಸ್‌ಗೆ ಮಂಗಳವಾರ ಜಿಲ್ಲೆ ಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದಿನದಲ್ಲಿ ಒಟ್ಟು 217 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 10,453ನ್ನು ತಲುಪಿದೆ. ದಿನದಲ್ಲಿ 1388 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೋವಿಡ್ ಪಾಸಿಟಿವ್ ಪತ್ತೆಯಾದ 217 ಮಂದಿಯಲ್ಲಿ ಉಡುಪಿ ತಾಲೂಕಿನ 122 ಮಂದಿ, ಕುಂದಾಪುರ ತಾಲೂಕಿನ 40 ಹಾಗೂ ಕಾರ್ಕಳ ತಾಲೂಕಿನ 51 ಮಂದಿ ಸೇರಿದ್ದು, ಉಳಿದಂತೆ ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಜಿಲ್ಲೆಗೆ ಬಂದ ನಾಲ್ಕು ಮಂದಿ ಪಾಸಿಟಿವ್ ಆಗಿದ್ದಾರೆ. ಮಕ್ಕಳು ಸೇರಿದಂತೆ 109 ಮಂದಿ ಪುರುಷರು ಹಾಗೂ 108 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 59 ಮಂದಿ ಪುರುಷರು ಹಾಗೂ 77 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ಡಾ.ಸೂಡ ತಿಳಿಸಿದರು.

ಪಾಸಿಟಿವ್ ದೃಢಗೊಂಡ 217 ಮಂದಿಯಲ್ಲಿ 82 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 69 ಮಂದಿ ಶೀತಜ್ವರದಿಂದ, ಆರು ಮಂದಿ ಉಸಿರಾಟ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶೀಯ ಪ್ರವಾಸ ಹಾಗೂ ಅಂ.ರಾ.ಪ್ರವಾಸದಿಂದ ಮರಳಿದ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ 58 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.

180 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಇಂದು 180 ಮಂದಿ ಚಿಕಿತ್ಸೆಯ ನಂತರ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 50 ಮಂದಿ ಕೋವಿಡ್ ಆಸ್ಪತ್ರೆಗಳಿಂದ,130 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 7737ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 2625 ಮಂದಿ ಇನ್ನೂ ಚಿಕಿತ್ಸೆ ಯಲ್ಲಿದ್ದು, ಇವರಲ್ಲಿ 1041 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1584 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

1388 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಮಂಗಳವಾರ ಒಟ್ಟು 1388 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯ ಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 945 ಮಂದಿ, ಕೋವಿಡ್ ಸಂಪರ್ಕಿತರು 200 ಮಂದಿ ಇದ್ದರೆ, ಉಸಿರಾಟ ತೊಂದರೆಯ 11 ಮಂದಿ, ಶೀತಜ್ವರದಿಂದ ಬಳಲುವ 36 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 196 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪರೀಕ್ಷೆಗಾಗಿ ಪಡೆದ 1338 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 66,694ಕ್ಕೇರಿದೆ. ಇವುಗಳಲ್ಲಿ ಈವರೆಗೆ 55,346 ನೆಗೆಟಿವ್, 10453 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 91 ಮಂದಿ ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಇನ್ನು ಒಟ್ಟು 895 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಇಂದು 217 ಮಂದಿಯನ್ನು ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಒಟ್ಟು 59 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 158 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ ಎಂದು ಅವರು ಹೇಳಿದರು.

ಇಬ್ಬರು ಬಲಿ: ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ಮಂಗಳವಾರ ಒಟ್ಟು ಇಬ್ಬರು ಕೋವಿಡ್-19ರ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ 87 ವರ್ಷ ಪ್ರಾಯದ ವೃದ್ಧ ಹಾಗೂ ಕುಂದಾಪುರ ತಾಲೂಕಿನ 67 ವರ್ಷ ವೃದ್ಧರು ಮೃತರಲ್ಲಿ ಸೇರಿ ದ್ದಾರೆ. ಇಬ್ಬರೂ ಉಸಿರಾಟದ ತೊಂದರೆಯೊಂದಿಗೆ ನ್ಯುನೋನಿಯಾ, ಮಧುಮೇಹ, ಕಿಡ್ನಿ ಸಮಸ್ಯೆಗಳಿಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತಿದ್ದು, ಕೋವಿಡ್ ಸೋಂಕಿ ನೊಂದಿಗೆ ಮೃತಪಟ್ಟಿರುವುದಾಗಿ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News