ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Update: 2020-08-27 14:34 GMT

ಉಡುಪಿ, ಆ.27: ಪ್ರಸ್ತುತ ಸಾಲಿನ ಮಿಲಿಟರಿ ಪಿಂಚಣಿದಾರ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕ ದಲ್ಲಿರುವ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ. ಒಂದರಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮವರೆಗೆ ಅರ್ಜಿ ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನ. ವೃತಿಪರ ವ್ಯಾಸಂಗ ಮಾಡುತ್ತಿರು ವವರಿಗೆ ಅರ್ಜಿ ಸ್ವೀಕರಿಸಲು ನ. 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News