ಯಾವುದೇ ಅಮಾಯಕರ ಬಂಧನ ಆಗಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ

Update: 2020-08-27 15:45 GMT

ಬೆಂಗಳೂರು, ಆ.27: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಮುಂದುವರೆದಿದ್ದು, ಈವರೆಗೆ ಯಾವುದೇ ಅಮಾಯಕರನ್ನೂ ಸಹ ಬಂಧನ ಮಾಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 377 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲವರ ವಿಚಾರಣೆ ನಡೆಸಿ, ಬಿಡುಗಡೆ ಮಾಡಿ ಕಳುಹಿಸಲಾಗಿದೆ ಎಂದರು.

ಪ್ರಕರಣ ಸಂಬಂಧಿಸಿದಂತೆ ಒಟ್ಟು 65 ಪ್ರಕರಣ ದಾಖಲಾಗಿದ್ದು, ಈ ಪೈಕಿ 3 ಪ್ರಕರಣಗಳು ಮಾತ್ರ ಸಿಸಿಬಿಗೆ ವರ್ಗಾಯಿಸಲಾಗಿದೆ. ಇನ್ನುಳಿದಂತೆ 62 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ನುಡಿದರು.

10 ಕೋಟಿ ನಷ್ಟ: ಗಲಭೆ ಪ್ರಕರಣದಿಂದಾಗಿ 10 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ಸೇರಿದಂತೆ ಇನ್ನಿತರ ನಷ್ಟ ಸಂಭವಿಸಿದೆ ಎಂಬುದು ಪ್ರಾಥಮಿಕ ಹಂತದಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನನ್ನನ್ನು ಎರಡು ಸಲ ಭೇಟಿ ಮಾಡಿದ್ದು, ತನಿಖೆಯ ಬಗ್ಗೆ ಅವರಿಗೆ ಸಮಾಧಾನವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News