ಕೋವಿಡ್19: ಬೆಂಗಳೂರಿನಲ್ಲಿಂದು 2,721 ಮಂದಿಗೆ ಪಾಸಿಟಿವ್, 2,148 ಮಂದಿ ಗುಣಮುಖ

Update: 2020-08-28 17:38 GMT

ಬೆಂಗಳೂರು, ಆ.28: ನಗರದಲ್ಲಿ ಶುಕ್ರವಾರದಂದು 2721 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 2,148 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಸೋಂಕಿಗೆ 41 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,21,449 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 1,886 ಜನರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. 83,041 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 36,521 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರಚಿಕಿತ್ಸಾಲಯದಲ್ಲಿ ಒಟ್ಟು 1,61,752 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಗುರುವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,723 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 40,563 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ಸಂಸದ ಶ್ರೀನಿವಾಸ್ ಪ್ರಸಾದ್ ಗುಣಮುಖ

ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಕೊರೋನ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಆ.25ರಂದು ಪ್ರಸಾದ್‍ಗೆ ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಗುರುವಾರ ರಾತ್ರಿ ನಡೆಸಿದ ಮತ್ತೊಂದು ಪರೀಕ್ಷೆಯಲ್ಲಿ ಅವರ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿತ್ತು. ಮಣಿಪಾಲ ಆಸ್ಪತ್ರೆಯ ವೈದ್ಯರಿಗೆ ಅವರಿಗೆ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News