ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೊರೋನ ಪಾಸಿಟಿವ್

Update: 2020-08-30 10:58 GMT

ಮಂಗಳೂರು : ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದೆ.

ಈ ಬಗ್ಗೆ ಅವರು ಟಿಟರ್ ನಲ್ಲಿ ''ನಾನು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News