​ಲ್ಯಾಬ್ ಟೆಕ್ನೀಷನ್ ಹಾಗೂ ಫಾರ್ಮಸಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Update: 2020-09-02 15:20 GMT

ಮಂಗಳೂರು, ಸೆ.2: ದ.ಕ. ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿ ಬರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಲ್ಯಾಬ್ಟೆಕ್ನಿಷನ್, ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ನೇಮಕ ಮಾಡಲು ಸೆ.12ರಂದು ಬೆಳಗ್ಗೆ 10:30ಕ್ಕೆ ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ.

ಹುದ್ದೆಯ ವಿವರ: ಪ್ರಯೋಗ ಶಾಲಾ ತಂತ್ರಜ್ಞರು 2 ಹುದ್ದೆ, ವಿದ್ಯಾರ್ಹತೆ -ಡಿಎಂಎಲ್ಟಿ (ಕರ್ನಾಟಕ ಪ್ಯಾರ ಮೆಡಿಕಲ್ ಬೋರ್ಡ ಪ್ರಮಾಣ ಪತ್ರ ಹೊಂದಿರಬೇಕು), ವೇತನ 20,000 ರೂ. ಫಾರ್ಮಸಿಸ್ಟ್ -17 ಹುದ್ದೆ, ವಿದ್ಯಾರ್ಹತೆ : ಡಿಫಾರ್ಮಾ (ಫಾರ್ಮಸಿ ಕೌನ್ಸಿಲ್ನಲ್ಲಿ ನೋಂದಣಿ ಆಗಿರಬೇಕು), ವೇತನ 20,000 ರೂ.

ಸಲ್ಲಿಸಬೇಕಾದ ದಾಖಲೆಗಳು: ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆದ್ದರಿಂದ ಅನುಭವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗುವುದು. (ಈಗಾಗಲೇ ಈ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದವರು ನೇರ ಸಂದರ್ಶನಕ್ಕೆ ಎಲ್ಲಾ ದಾಖಲಾತಿಗಳೊಂದಿಗೆ ಹಾಜರಾಗುವುದು). ಮಾಹಿತಿಗಾಗಿ ದೂ.ಸಂ:0824-2423672ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News