ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ದಾಖಲು

Update: 2020-09-04 12:38 GMT

ಬೆಂಗಳೂರು, ಸೆ. 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ.

ಇನ್ನೂ ಕೆಲವು ದಿನಗಳ ಕಾಲ ತಾವು ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆಯಲಿದ್ದು, ಕಾರ್ಯಕರ್ತರು, ಅಭಿಮಾನಿಗಳು ಆಸ್ಪತ್ರೆಗೆ ಅಥವಾ ತಮ್ಮ ನಿವಾಸಕ್ಕೆ ಆಗಮಿಸುವುದು ಬೇಡ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ಮನವಿ ಮಾಡಿದ್ದಾರೆ.

ಕೊರೋನ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಆ. 25ಕ್ಕೆ ನಗರದ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಶಿವಕುಮಾರ್ ಅವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ, ಇಂದು ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News