ಬೈಂದೂರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Update: 2020-09-06 12:41 GMT

ಬೈಂದೂರು, ಸೆ.6: ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿ ಸುವಂತೆ ಒತ್ತಾಯಿಸಿ ರೈತರ, ಕಾರ್ಮಿಕರ, ಕೂಲಿಕಾರರ ಐಕ್ಯ ಪ್ರತಿಭಟನೆಯು ಸೆ.5ರಂದು ಬೈಂದೂರು ತಾಪಂ ಎದುರು ನಡೆಯಿತು.

ಪ್ರತಿಯೊಬ್ಬರನ್ನು ಉಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಉಚಿತ ಚಿಕಿತ್ಸೆ ಒದಗಿಸಬೇಕು. ಮುಂದಿನ ಆರು ತಿಂಗಳವರೆಗೆ ಮಾಸಿಕ 7500ರೂ. ಕೋವಿಡ್ ಪರಿಹಾರ ನೀಡಬೇಕು. ಕುಟುಂಬದ ಪ್ರತಿ ಸದಸ್ಯನಿಗೂ ಮಾಸಿಕ 10ಕೆ.ಜಿ. ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ವೇತನ ವನ್ನು ಕನಿಷ್ಠ 600ರೂ.ಗೆ ಹೆಚ್ಚಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್, ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕೃಷಿಕೂಲಿಕಾರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಮಾತನಾಡಿದರು. ಈ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭಾರತಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ನಾಗರತ್ನ ನಾಡ, ರಾಜೀವ ಪಡುಕೋಣೆ, ರಾಘವೇಂದ್ರ ಬಿಜೂರು, ಕಟ್ಟಡ ಕಾರ್ಮಿಕ ಮುಖಂಡರಾದ ಉದಯ ಗಾಣಿಗ, ವಿಜಯ ಕೋಯನಗರ, ಮಂಜು ಪಡುವರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News